ಜೊಯಿಡಾ | ರಾಮನಗರ ಸಮೀಪ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

Date:

ಜೊಯಿಡಾ: ಗೋವಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ರಾಮನಗರ ಸಮೀಪದ ಅಸ್ತೋಲಿ ಎಂಬಲ್ಲಿ ಬುಧವಾರ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಗೋವಾದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಇನೋವಾ ಹಾಗೂ ಹುಬ್ಬಳ್ಳಿಯಿಂದ ಗೋವಾಕ್ಕೆ ಸಾಗುತ್ತಿದ್ದ ರೆನಾಲ್ಟ್ ಕ್ವಿಡ್ ಕಾರುಗಳ ನಡುವೆ ಈ ಭೀಕರ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಕ್ವಿಡ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮೃತರನ್ನು ಹುಬ್ಬಳ್ಳಿ ತಾಲೂಕಿನ ಲಕ್ಷ್ಮೇಶ್ವರ ಮೂಲದ ರುದ್ರಯ್ಯ ಶಿವನವರ (77) ಮತ್ತು ರೇಣುಕಾ ಹಿರೇಮಠ (60) ಎಂದು ಗುರುತಿಸಲಾಗಿದೆ. ರುದ್ರಯ್ಯ ಅವರು ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನದೊಳಗೆ ಸಿಲುಕಿಕೊಂಡಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಅವರನ್ನು ತಕ್ಷಣವೇ ರಾಮನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಶಿವರಾಜ ಶಿವನವರ (28) ಹಾಗೂ ಬಸವ ಶಿವನವರ (70) ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!

ಮೃತರು ಮತ್ತು ಗಾಯಾಳುಗಳು ಮೂಲತಃ ಲಕ್ಷ್ಮೇಶ್ವರದವರಾಗಿದ್ದು, ಸದ್ಯ ಗೋವಾದ ಫೊಂಡಾದಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ. ಇನ್ನು ಇನೋವಾ ಕಾರಿನಲ್ಲಿದ್ದವರು ಪ್ರವಾಸ ಮುಗಿಸಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ರಾಮನಗರ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ, ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ನೆರವಾದರು. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಸದ್ಯ ಲೋಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...