ಜೊಯಿಡಾ | ಎಸ್‌ಐಆರ್-2026ರ ಅಂಗವಾಗಿ ಯಶಸ್ವಿ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ

Date:

ಎಸ್‌ಐಆರ್-2026 ಕಾರ್ಯಕ್ರಮದ ಅಂಗವಾಗಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಜೊಯಿಡಾ ತಾಲೂಕು ಪಂಚಾಯತ್, ತಾಲೂಕು ಸ್ವೀಪ್ ಸಮಿತಿ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶೇಷ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿಯಾಗಿ ನಡೆಯಿತು.

- Advertisement -

ಮತದಾರರ ಜಾಗೃತಿ ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಎಸ್‌ಐಆರ್-2026ರ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಶಿಬಿರವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಾರತಿ ಎನ್. ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಇ ಸುದ್ದಿ ಓದಿದ್ದೀರಾ? ದಾಂಡೇಲಿ | ‘ಮೇವಾ ಮೋದಕ್’ ಹೆಸರಿನಲ್ಲಿ ಮಾದಕ ವಸ್ತು ಮಾರಾಟ ಆರೋಪ; ಪೊಲೀಸ್ ದಾಳಿ, 1.986 ಕೆ.ಜಿ. ವಸ್ತು ಜಪ್ತಿ

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವೈದ್ಯರು, ತಾಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತಿ ಎನ್. ಅವರು ಎಸ್‌ಐಆರ್-2026ರ ಮಹತ್ವವನ್ನು ವಿವರಿಸಿ, ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ರಕ್ತದಾನದ ಅಗತ್ಯತೆ ಮತ್ತು ಅದರ ಸಾಮಾಜಿಕ ಮಹತ್ವದ ಕುರಿತು ಅರಿವು ಮೂಡಿಸಿದರು.

ಅವರ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಮುಖಿ ಸೇವೆಗೆ ಕೈಜೋಡಿಸಿದರು. ಶಿಬಿರದಲ್ಲಿ ಒಟ್ಟು 21 ಯೂನಿಟ್ ರಕ್ತ ಸಂಗ್ರಹವಾಗಿದ್ದು, ರಕ್ತದಾನ ಮಾಡಿದ ಎಲ್ಲ ದಾನಿಗಳಿಗೆ ತಾಲೂಕು ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಪ್ರಶಂಸಾ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಇದೇ ವೇಳೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ವಚ್ಛತಾ ಗೃಹಕಾರ್ಮಿಕರಿಗಾಗಿ ಆಯೋಜಿಸಿದ್ದ ವಿಶೇಷ ಆರೋಗ್ಯ ತಪಾಸಣೆ ಶಿಬಿರದಲ್ಲಿ 35 ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದಾನದ ಮಹತ್ವ ಹಾಗೂ ಆರೋಗ್ಯ ಜಾಗೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...