ಕೋಲಾರ: ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಮೈಲಾಂಡಹಳ್ಳಿ ಮುರಳಿ, ಹಾಗೂ ನಗರ ಬ್ಲಾಕ್ ಅಧ್ಯಕ್ಷರಾಗಿ ನಗರಸಭೆ ಸದಸ್ಯ ಸೈಯದ್ ಅಪ್ಸರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೋಲಾರ ತಾಲೂಕಿನ ಮೈಲಾಂಡಹಳ್ಳಿ ಗ್ರಾಮದ ಮುರಳಿ ಅವರು ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ನಗರ ಬ್ಲಾಕ್ ಅಧ್ಯಕ್ಷರಾಗಿ ರೆಹಮತ್ ನಗರದ ಸೈಯದ್ ಅಪ್ಸರ್ ಅವರು ಮೂರು ಬಾರಿ ನಗರಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಕಾಂಗ್ರೆಸ್ ಪಕ್ಷವು ಅವರನ್ನು ಗುರುತಿಸಿ ಮಹತ್ವದ ಜವಾಬ್ದಾರಿ ವಹಿಸಿದ್ದಾರೆ.
ಇದನ್ನು ಓದಿದ್ದೀರಾ..? ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಹಿಂದುಳಿದವರಿಗೆ ಮಾತ್ರವಲ್ಲ ರಾಜ್ಯದ ಒಳಿತಿಗಾಗಿ -ಸುದರ್ಶನ್
ತಕ್ಷಣ ಕೋಲಾರ ಗ್ರಾಮಾಂತರ ಮತ್ತು ನಗರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಡಿ.ಕೆ ಶಿವಕುಮಾರ್ ಆದೇಶ ಮಾಡಿದ್ದಾರೆ.