ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ

Date:

Advertisements

ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನಲ್ಲಿ ದೇವನಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ವತಿಯಿಂದ ಹಮ್ಮಿಕೊಳ್ಳಲಾದ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು

ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನಷ್ಟು ಬೆಳೆಯಬೇಕು. ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಸರ್ಕಾರದಿಂದ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಬಹಳಷ್ಟು ಕೊಡುಗೆ ನೀಡುತ್ತಿದೆ. ಸಹಕಾರ ಸಂಘಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.

ಪಂಚಾಯಿತಿಗಳು ಶಾಶ್ವತ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಪಂಚಾಯಿತಿಗಳಿಗೆ ಆದಾಯ ಬರುವಂತಹ ಅತ್ಯುತ್ತಮ ಕೆಲಸ ಮಾಡಿದ್ದೀರಿ, ಆದಾಯದ ಸದ್ಬಳಕೆಯಿಂದ ಗ್ರಾಮಗಳಲ್ಲಿ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪಂಚಾಯಿತಿ ವ್ಯವಸ್ಥೆ, ನರೇಗಾ ಯೋಜನೆ ಜಾರಿಗೆ ತರಲಾಯಿತು. ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಹಣದ ಸದುಪಯೋಗ ಪಡೆದುಕೊಂಡರೆ ಗ್ರಾಮ, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗೆ ಪೂರಕ. ಪಂಚಾಯಿತಿಗಳಿಗೆ ಬರುವ ಹಣ ಸದ್ಬಳಕೆ ಆಗಬೇಕು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರು.

ರೈತರು ಕೃಷಿ ಚಟುವಟಿಕೆಗಳೊಂದಿಗೆ ಹಾಲು ಉತ್ಪಾದನೆ, ರೇಷ್ಮೆ ಉತ್ಪಾದನೆಯಲ್ಲಿ ತೊಡಗಬೇಕು. ಹಾಲು ಉತ್ಪಾದನೆಯಿಂದ 15 ದಿನಕ್ಕೆ ಹಣ ಸಿಗುತ್ತದೆ, ರೇಷ್ಮೆ ಉತ್ಪಾದನೆಯಲ್ಲಿ ತಿಂಗಳಿಗೆ ಹಣ ಸಿಗುತ್ತದೆ. ಇವೆರಡೂ ಕೂಡ ಲಾಭದಾಯಕ ಕೆಲಸಗಳು ಎಂದರು.

ವಿಶ್ವನಾಥಪುರ ಪಂಚಾಯಿತಿ ವ್ಯಾಪ್ತಿಯಲ್ಲಿ 9 ನೂತನ ವಾಣಿಜ್ಯ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು 98 ಲಕ್ಷ ವೆಚ್ಚ ಭರಿಸಲಾಗಿದೆ. ಈ ಕಟ್ಟಡಗಳಿಂದ ತಿಂಗಳಿಗೆ ಒಂದು ಲಕ್ಷ ಬಾಡಿಗೆ ಬರುವ ನಿರೀಕ್ಷೆ ಇದೆ ಎಂದು ಇಒ ಶ್ರೀನಾಥ್ ಗೌಡ ಮಾಹಿತಿ ನೀಡಿದರು. ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದರು.

ಇದನ್ನು ಓದಿದ್ದೀರಾ..? ಕೋಮುಲ್ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತಿನ ಚಕಮಕಿ

ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್, ಇಒ ಶ್ರೀನಾಥ್ ಗೌಡ, ತಹಶೀಲ್ದಾರ್ ಅನಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X