ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹಿಗಳಾಗಿರುವ ಎನ್‌ಡಿಎ ನಾಯಕರು ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಗುರುವಾರ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಎನ್‌ಡಿಎ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದಾರೆ. ಒಗ್ಗಟ್ಟಿನ ಸ್ಪರ್ಧೆಯ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ.