ಕಾನೂನು ವಿದ್ಯಾರ್ಥಿನಿ ಮೇಲೆ ಕಾನೂನು ಕಾಲೇಜಿನ ಆವರಣದಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಬಂಧಿಸಲಾಗಿದೆ.
ಜೂನ್25ರ ಸಂಜೆ 7.30ರಿಂದ 10.50ರ ನಡುವೆ ಈ ಘಟನೆ ನಡೆದಿದೆ. ಕಳೆದ ವರ್ಷವಷ್ಟೇ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.