ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಮಧ್ಯಾಹ್ನ 12:30ಕ್ಕೆ ನಡೆಯಿತು.
ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಹಲವು ಗಣ್ಯರು ಭೈತರಪ್ಪ ಅವರಿಗೆ ಕಣ್ಣೀರಿನ ವಿದಾಯ ಹೇಳಿದರು.
ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಎಸ್ ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು.