‘ಚಪ್ಪಲಿಯಲ್ಲಿ ಹೊಡಿತಾರೆ’: ಮಾಗಡಿ ತಹಶೀಲ್ದಾರ್‌ಗೆ ಶಾಸಕ ಬಾಲಕೃಷ್ಣ ಆವಾಜ್!

Date:

‘ನಿನಗೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ’ ಎಂದು ಮಾಗಡಿ ತಜಶೀಲ್ದಾರ್‌ಗೆ ಶಾಸಕ ಎಚ್‌ಸಿ ಬಾಲಕೃಷ್ಣ ಅವಾಜ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿಯಲ್ಲಿ‌ನಡೆದ ಸಾರ್ವಜನಿಕ‌ ಕುಂದುಕೊರತೆ ಸಭೆಯಲ್ಲಿ‌ ತಹಶೀಲ್ದಾರ್ ಶರತ್ ಕುಮಾರ್ ಅವರಿಗೆ ಕಾಂಗ್ರೆಸ್ ಬಾಲಕೃಷ್ಣ ಆವಾಜ್ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಭೆಯಲ್ಲಿ ರೈತರು ತಮ್ಮ ಸಮಸ್ಯೆಗಳನ್ನು‌ ಹೇಳಿಕೊಂಡಿದ್ದಾರೆ. ಸಮಸ್ಯೆಗಳನ್ನು ಆಲಿಸಿದ ಶಾಸಕ ಎಲ್ಲರ ಎದುರೇ ತಹಶೀಲ್ದಾರ್‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಂದಿಸಿದ್ದಾರೆ.

“ಜನರ ಕೆಲಸಗಳನ್ನು ಸರಿಯಾಗಿ ಮಾಡಿಕೊಡದಿದ್ದರೆ, ಜನ ನಿನಗೂ ಹೊಡಿತಾರೆ, ನನಗೂ ಹೊಡಿತಾರೆ. ಸರಿಯಾಗಿ ಕೆಲಸ ಮಾಡಿಸಲು ಆಗದಿದ್ದಕ್ಕೆ ಮೊದಲು ನನಗೆ ಚಪ್ಪಲಿಯಲ್ಲಿ ಹೊಡಿತಾರೆ, ಆಮೇಲೆ ನಿನಗೆ ಹೊಡೆಯುತ್ತಾರೆ” ಎಂದು ಶಾಸಕ ಬಾಲಕೃಷ್ಣ ಎಚ್ಚರಿಕೆ ನೀಡಿದ್ದಾರೆ.

“ಅಧಿಕಾರಿಗಳ ಬೇಜವಾಬ್ದಾರಿ, ನಿರ್ಲಕ್ಷ್ಯದಿಂದ ಜನಪ್ರತಿನಿಧಿಗಳಿಗೆ ಮುಜುಗರವಾಗುತ್ತಿದೆ. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಾ? ಕೆಲಸ ಮಾಡಲು ನಾಚಿಕೆ ಆಗಲ್ವಾ ನಿಮಗೆ? ಎಷ್ಟೋ ಅಧಿಕಾರಿಗಳು ಉತ್ತಮ ಕೆಲಸ ಮಾಡಿ ಹೆಸರುವಾಸಿಯಾಗಿದ್ದಾರೆ. ಆದರೆ ನೀವು ಜನರನ್ನು ಯಾಕೆ ಸತಾಯಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...