ಸುಲಿಗೆ ಆರೋಪ: ಪಿಎಸ್‌ಐ ಅಮಾನತು

Date:

ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ ಹಾಕಿ ಜೆರಾಕ್ಸ್ ಅಂಗಡಿ ಮಾಲೀಕನಿಂದ ಸುಮಾರು 1.6 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ.

- Advertisement -

ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆಯ ಕನಕಪುರ ತಾಲೂಕಿನ ಕಗ್ಗಲೀಪುರ ಠಾಣೆಯ ಪಿಎಸ್‌ಐ ಹರೀಶ್ ಅಮಾನತುಗೊಂಡ ಅಧಿಕಾರಿ. ಅವರನ್ನು ಅಮಾನತು ಮಾಡಿ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕನಕಪುರದಲ್ಲಿ ಜೆರಾಕ್ಸ್ ಅಂಗಡಿ ನಡೆಸುತ್ತಿದ್ದ ರಾಜೇಶ್ ಎಂಬರನ್ನು ಸುಳ್ಳು ಆರೋಪದ ಮೇಲೆ ಬೆದರಿಸಿ ಪಿಎಸ್‌ಐ ಹರೀಶ್ ಹಣ ಸುಲಿಗೆ ಮಾಡಿದ್ದಾರೆ. ರಾಜೇಶ್‌ಗೆ ಆಗ್ಗಾಗೆ ಕರೆ ಮಾಡುತ್ತಿದ್ದ ಪಿಎಸ್‌ಐ ಹರೀಶ್, “ನೀವು ನಕಲಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದೀರಿ ಎಂಬ ಗಂಭೀರ ಆರೋಪ ಇದೆ. ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ವಜಾ ಮಾಡಲು ಹಣ ಕೊಡಬೇಕು” ಎಂದು ಬೇಡಿಕೆ ಇಟ್ಟಿದ್ದಾಗಿ ಆರೋಪಿಸಲಾಗಿದೆ.

ಪೊಲೀಸ್ ಪ್ರಕರಣಗಳಿಗೆ ಹೆದರಿದ ರಾಜೇಶ್ ಅವರು ಪಿಎಸ್‌ಐಗೆ 1.6 ಲಕ್ಷ ರೂ.ಗಳನ್ನು ಮೂರು ಕಂತುಗಳಲ್ಲಿ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...