ಮಧ್ಯಪ್ರದೇಶ | ದಲಿತ ಯುವಕನಿಗೆ ಥಳಿತ, ಮೂತ್ರ ಕುಡಿಯುವಂತೆ ಬಲವಂತ

Date:

ದಲಿತ ಯುವಕನನ್ನು ಅಪಹರಿಸಿ, ಆತನ ಮೇಲೆ ಹಲ್ಲೆ ನಡೆಸಿರುವ ಸವರ್ಣೀಯ ದುರುಳರು, ಆತನಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ದಲಿತ ಸಮುದಾಯದ ಸಂತ್ರಸ್ತನು ಬೊಲೆರೊ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅವರು ಈ ಹಿಂದೆ, ಭಿಂಡ್‌ನ ನಿವಾಸಿ ಸೋನು ಬರು ಎಂಬಾತನ ಬಳಿ ಕೆಲಸ ಮಾಡಿದ್ದರು. ಇತ್ತೀಚೆಗೆ ಕೆಲಸ ತೊರೆದಿದ್ದರು. ಗ್ವಾಲಿಯರ್‌ನಲ್ಲಿರುವ ತನ್ನ ಪತ್ನಿಯ ತವರು ಮನೆಯಲ್ಲಿ ನೆಲೆಸಿದ್ದರು. ಅವರನ್ನು ಮೂವರು ಸವರ್ಣೀಯರು ಗ್ವಾಲಿಯರ್‌ನಿಂದ ಅಪಹರಿಸಿ, ದೌರ್ಜನ್ಯ ಎಸಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಮ್ಮ ಮೇಲಾದ ದೌರ್ಜನ್ಯ/ಹಲ್ಲೆ ಕುರಿತು ಪೊಲೀಸರಿಗಡ ದೂರು ನೀಡಿರುವ ಸಂತ್ರಸ್ತ, “ಮೂರು ದಿನಗಳ ಹಿಂದೆ ಸೋನು ಬರುವಾ ಅವರು ಅಲೋಕ್ ಪಾಠಕ್ ಹಾಗೂ ಛೋಟು ಓಝಾ ಎಂಬವರ ಜೊತೆ ತನ್ನ ಪತ್ನಿಯ ತವರು ಮನೆಗೆ ಬಂದಿದ್ದರು. ತಮ್ಮ ಜೊತೆಯಲ್ಲೇ ಕೆಲಸ ಮಾಡುವಂತೆ ಒತ್ತಾಯಿಸಿದರು. ಆದರೆ, ನಾನು ನಿರಾಕರಿಸಿದೆ. ಬಳಿಕ ಅವರು ನನ್ನನ್ನು ಬೊಲೆರೊದಲ್ಲಿ ಬಲವಂತವಾಗಿ ಕೂಡಿ ಹಾಕಿ ಕರೆದೊಯ್ದರು” ಎಂದು ಆರೋಪಿಸಿದ್ದಾರೆ.

“ಭಿಂಡ್‌ಗೆ ನನ್ನನ್ನು ಎಳೆದೊಯ್ದು, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದ್ದಾರೆ. ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ಬಳಿಕ, ಮೂತ್ರವನ್ನು ಕುಡಿಯುವಂತೆ ಬಲವಂತಪಡಿಸಿದ್ದಾರೆ. ಅಲ್ಲದೆ ಅಕುಟುಪುರಾ ಗ್ರಾಮಕ್ಕೆ ನನ್ನನ್ನು ಕರೆದೊಯ್ದು ನನ್ನನ್ನು ಕಬ್ಬಿಣದ ಸರಪಳಿಯಿಂದ ಕಟ್ಟಿಹಾಕಿ, ರಾತ್ರಿಯಿಡೀ ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ಆರೋಪಿಸಿದ್ದಾರೆ

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...