ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಕ್ಯಾ ಕ್ರಾಸ್ ಬಳಿ ನಡೆದಿದೆ.
ಚಿಕ್ಕಮಗಳೂರಿನಲ್ಲಿ ನಡೆದ ಬಸವ ತತ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಿವಮೊಗ್ಗಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.