ಉತ್ತರ ಪ್ರದೇಶ | 2025ರಲ್ಲಿ 2,500ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು

Date:

2025ರಲ್ಲಿ ಉತ್ತರ ಪ್ರದೇಶದಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌ಗಳನ್ನು ಪೊಲೀಸರು ನಡೆಸಿದ್ದಾರೆ. ಇವುಗಳಲ್ಲಿ 48 ಆರೋಪಿಗಳು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಡಿಜಿಪಿ ರಾಜೀವ್ ಕೃಷ್ಣ ತಿಳಿಸಿದ್ದಾರೆ.

- Advertisement -

ಸುದ್ದಿ ಗೋಷ್ಠಿ ನಡೆಸಿ ವಿವರ ನೀಡಿರುವ ಅವರು, “2017ರಿಂದ ಈವರೆಗೆ 266 ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ. ಅಂದಹಾಗೆ,2017ರಿಂದ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಯ ಸೂಚನೆಗಳಿಗೆ ಅನುಗುಣವಾಗಿ ಪೊಲೀಸ್ ಕಾರ್ಯಾಚಾರಣೆಗಳು (ಎನ್‌ಕೌಂಟರ್) ನಡೆದಿವೆ ಎಂದು ಡಿಜಿಪಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“2025ರಲ್ಲಿ, ಪೊಲೀಸರು 2,739 ಕಾರ್ಯಾಚರಣೆಗಳನ್ನು ನಡೆಸಿದ್ದಾರೆ. ಇದರಲ್ಲಿ 3,153 ಆರೋಪಿಗಳು ಗಾಯಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಓರ್ವ ಪೊಲೀಸ್ ಕೂಡ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎನ್‌ಕೌ‌ಂಟರ್‌ಗಳಲ್ಲಿ 2018ರಲ್ಲಿ 41, 2019ರಲ್ಲಿ 34, 2020 ಮತ್ತು 2021ರಲ್ಲಿ ತಲಾ 26, 2022ರಲ್ಲಿ 13, 2023ರಲ್ಲಿ 26 ಹಾಗೂ 2024ರಲ್ಲಿ 25 ಸಾವುಗಳು ಸಂಭವಿಸಿವೆ. ಈ ಎಲ್ಲ ಅವಧಿಯಲ್ಲಿ‌ ಒಟ್ಟು 16,284 ಎನ್‌ಕೌಂಟರ್‌ಗಳು ನಡೆದಿದ್ದು,10,990 ಆರೋಪಿಗಳು ಗಾಯಗೊಂಡಿದ್ದಾರೆ, 266 ಮಂದಿ ಸಾವನ್ನಪ್ಪಿದ್ದಾರೆ” ಎಂದು ವಿವರಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...