ಕೆಎಸ್‌ಆರ್‌ಟಿಸಿಯಲ್ಲ ಮೆಕ್ಯಾನಿಕ್ ನೌಕರನಾಗಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಸಾರಿಗೆ ಬಸ್‌ನಲ್ಲಿಯೇ ನೇಟು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಎನ್‌ಡಬ್ಲ್ಯೂಆರ್‌ಟಿಸಿ ಡಿಪೋ-1ರಲ್ಲಿ ನಡೆದಿದೆ. ಮೃತನನ್ನು ಬಸ್ ಮೆಕ್ಯಾನಿಕ್ ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಅವರು ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದಾರೆ. ಮೇಲಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕೇಶವ ಅವರು ಕೆಲ ದಿನಗಳಿಂದ ಬೆನ್ನು ನೋವಿಗೆ ತುತ್ತಾಗಿದ್ದರು. ಕೆಲವು ದಿನಗಳವರೆಗೆ ತಮ್ಮ ಕೆಲಸವನ್ನು ಬದಲಿಸದಂತೆ ಡಿಪೋ ಮ್ಯಾನೇಜರ್ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್ ಅವರಿಗೆ ಮನವಿ ಮಾಡಿದ್ದರು. ಆದರೂ, ಅವರನ್ನು ಅಧಿಕಾರಿಗಳು ಪಂಚರ್ ಹಾಕುವ ವಿಭಾಗಕ್ಕೆ ಬದಲಾಯಿಸಿ, ನಿಯೋಜಿಸಿದ್ದರು. ಇದರಿಂದ ನೊಂದ ಕೇಶವ ಅವರು ಕೆಲಸದ ಸ್ಥಳದಲ್ಲಿಯೇ ಬಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್ನಲ್ಲೇ ಸಾರಿಗೆ ನೌಕರ ಆತ್ಮಹತ್ಯೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: