ಬೆಂಗಳೂರು ನಗರದಲ್ಲಿ ಭಾನುವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ರಾಮ ನವಮಿ ಹಬ್ಬದ ಕಾರಣದಿಂದಾಗಿ ನಾಳೆ (ಏಪ್ರಿಲ್ 6) ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮತ್ತು ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
