ಗ್ರಾಮದಲ್ಲಿ ವಿದ್ಯುತ್, ನೀರು ಸರಬರಾಜು ಕಡಿತ; ‘ಜಾತಿ ಪಕ್ಷಪಾತ’ವೆಂದು ನಿವಾಸಿಗಳ ಆರೋಪ

Date:

ದಲಿತ ಸಮುದಾಯದ ಜನರು ವಾಸಿಸುವ ಪ್ರದೇಶಕ್ಕೆ ವಿದ್ಯುತ್ ಮತ್ತು ನೀರು ಸರಬರಾಜು ಸ್ಥಗಿತಗೊಂಡಿರುವ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯ ದುಮೇರ್‌ಚುವಾನ್ ಗ್ರಾಮದಲ್ಲಿ ನಡೆದಿದೆ. ಇದು, ‘ಜಾತಿ ತಾರತಮ್ಯ’ದ ಕೃತ್ಯವೆಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ.

- Advertisement -

ಕೆಲವು ದಿನಗಳಿಂದ ಪೈಪ್ ನೀರು ಸರಬರಾಜು ಸ್ಥಗಿತಗೊಂಡಿತ್ತು. ಇದೀಗ, ಬೀದಿ ದೀಪಗಳನ್ನು ಸಹ ಆಫ್ ಮಾಡಲಾಗಿದೆ. ಪರಿಣಾಮ, ನಮ್ಮ ಪ್ರದೇಶವು ಕತ್ತಲೆಯಲ್ಲಿ ಮುಳುಗಿದೆ ಎಂದು ದಲಿತ ನಿವಾಸಿಗಳು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಗ್ರಾಮದ ನಿವಾಸಿಯೊಬ್ಬರು ಹೇಳುವಂತೆ, “ಗ್ರಾಮದ ಇತರ ಭಾಗದಲ್ಲಿ ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಸಮರ್ಪಕವಾಗಿದೆ. ಆದರೆ, ನಮಗೆ ವಿದ್ಯುತ್ ಮತ್ತು ನೀರಿನ ಸೌಲಭ್ಯವಿಲ್ಲ. ನಮ್ಮನ್ನು ವಂಚಿತರನ್ನಾಗಿ ಮಾಡಲಾಗಿದೆ. ನಾವು ಘನತೆಯಿಂದ ಬದುಕಲು ಸಾಧ್ಯವಾಗದಂತೆ ತಡೆಯಲಾಗುತ್ತಿದೆ. ನಮ್ಮ ಸಮಸ್ಯೆಗಳನ್ನು ಪರಿಹರಿಸಲು ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದಿದ್ದಾರೆ.

“ನಮಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ವಿದ್ಯುತ್ ಕೊರತೆಯಿಂದಾಗಿ ನಮ್ಮ ಬೀದಿಗಳು ಕತ್ತಲೆಯಲ್ಲಿವೆ. ಬಿಸಿಲಿನ ದಿನಗಳಲ್ಲಿ ನೀರು ಸಿಗುವುದಿಲ್ಲ. ನಮಗೆ ನೀರಿನ ಭರವಸೆ ನೀಡಲಾಗಿತ್ತು, ಆದರೆ ಅದು ಇನ್ನೂ ಆಗಿಲ್ಲ” ಎಂದು ಗ್ರಾಮದ ಮಹಿಳೆಯೊಬ್ಬರು ಹೇಳಿದ್ದಾರೆ.

ಅಧಿಕಾರಿಗಳ ತಂಡವು ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಕಾಂತಾಬಂಜಿ ಪ್ರದೇಶದ ತಹಶೀಲ್ದಾರ್ ಬಿಸ್ನಾಥ್ ಖಾಲ್ಖೋ ಹೇಳಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...