ಜನವರಿ ತಿಂಗಳ ಆರಂಭದಲ್ಲಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘೋಷಿಸಿದ್ದಾರೆ.
ಛತ್ತೀಸ್‌ಗಢದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರನ್ನು ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರೆ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಅವರನ್ನು ಜನವರಿ 5ರಂದು ಹೈದ್ರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಿಜಾಪುರದಲ್ಲಿ ಸುರೇಶ್ ನಡೆಸುತ್ತಿದ್ದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖೇಶ್ ವರದಿ ಪ್ರಕಟಿಸಿದ್ದರು. ಆ ಕಾರಣಕ್ಕಾಗಿ, ಅವರನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆ ವೇಳೆ ತಿಳಿದುಬಂದಿರುವುದಾಗಿ ವರದಿಯಾಗಿದೆ.