ಹರಿಯಾಣದ ಗುರುಗ್ರಾಮ ಜಿಲ್ಲೆಯ ಕಂಕ್ರೋಲಾ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಈ ಕುರಿತು ಖೇರ್ಕಿ ದೌಲಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.
