ಪಹಗ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಶನಿವಾರ ಪಾಕಿಸ್ತಾನದ ಎಲ್ಲಾ ಸರಕುಗಳ ಆಮದನ್ನು ಭಾರತ ನಿಷೇಧಿಸಿ ಆದೇಶ ಹೊರಡಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹಡಗುಗಳು ತನ್ನ ಬಂದರು ಪ್ರವೇಶಿಸುವುದನ್ನು ಪಾಕಿಸ್ತಾನ ನಿಷೇಧಿಸಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.
