ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಎರಡು ವಾರಗಳ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಈ ನಡುವೆ “ಭಾರತದ ವಿಮಾನಗಳನ್ನು ನಾವೂ ಹೊಡೆದಿದ್ದೇವೆ” ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪಾಕಿಸ್ತಾನದ ವಾಯುಪಡೆಯು ಎರಡು ಭಾರತೀಯ ವಿಮಾನಗಳನ್ನು ಹೊಡೆದುರುಳಿಸಿದೆ ಎಂದೂ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿಕೊಂಡಿದ್ದಾರೆ. ಭಟಿಂಡಾ ಮತ್ತು ಅಖ್ನೂರ್‌ನಲ್ಲಿ ಈ ಘಟನೆ ನಡೆದಿದೆ ಎಂದಿದ್ದಾರೆ.
