ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ನೇಮಕವಾಗಿದ್ದಾರೆ. ಹಾಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗುತ್ತಿದ್ದು, ಇವರಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಯನ್ನು ಹಂಗಾಮಿಯಾಗಿ ಡಾ.ಎಂ.ಎ.ಸಲೀಂ ಅವರು ಬುಧವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಎರಡು ತಿಂಗಳ ಬಳಿಕ ಕಾಯಂ ಆಗಿ ನೇಮಕಗೊಳ್ಳಲಿದ್ದಾರೆ.
