ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಬೀಸುತ್ತಿದ್ದ ಬಿರುಗಾಳಿಗೆ ಗುಡಿಸಲಿನ ಮೇಲ್ಛಾವಣಿ ಹಾರಿ ಹೋಗಿದೆ. ಮನೆಯಲ್ಲಿದ್ದವರು ಛಾವಣಿ ಹಾರಿಹೋಗದಂತೆ ಹಿಡಿಯಲು ಯತ್ನಿಸಿದ್ದಾರೆ. ಛಾವಣಿಯನ್ನು ಹಿಡಿದುಕೊಂಡಿದ್ದಾರೆ. ಆದರೆ, ಛಾವಣಿ ಸಮೇತವಾಗಿ ಮಕ್ಕಳು ಕೂಡ ಹಾರಿಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
