ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ವಂಚಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ನಡುವೆ ಆರೋಪಿ ತಲೆಮರೆಸಿಕೊಂಡಿದ್ದ. ಪುತ್ತೂರು ಬಪ್ಪಳಿಗೆ ನಿವಾಸಿ, ಬಿಜೆಪಿ ಮುಖಂಡ ಹಾಗೂ ವಾಸ್ತುಶಿಲ್ಪಿ ಪಿ ಜಿ ಜಗನ್ನಿವಾಸ್ ರಾವ್ ಎಂಬವರ ಪುತ್ರ ಪಿ ಜಿ ಕೃಷ್ಣ ಜೆ. ರಾವ್(21) ಆರೋಪಿತ. ಸಂತ್ರಸ್ತೆ ಹಾಗೂ ಕೃಷ್ಣ ಜೆ ರಾವ್ ಇಬ್ಬರೂ ಸಹಪಾಠಿಗಳು. ಇಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿ ಯಾರೂ ಇಲ್ಲದ ವೇಳೆ ಯುವತಿಯನನ್ನು ಮನೆಗೆ ಕರೆತಂದು ಬಲವಂತವಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ.
