ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶಿಸಿದ್ದಾರೆ. ಬಂಟ್ವಾಳ, ಉಳ್ಳಾಲದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
