ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮೇಲೆ ಹೆಚ್ಚುವರಿ ಶೇಕಡ 25ರಷ್ಟು ಸುಂಕವನ್ನು ವಿಧಿಸುವ ಆದೇಶ ಹೊರಡಿಸಿದ್ದಾರೆ. ಅಂದರೆ ಇನ್ನು ಮುಂದೆ ಭಾರತದ ಸರಕುಗಳ ಆಮದು ಮಾಡಿಕೊಳ್ಳುವುದಾದರೆ ಅಮೆರಿಕದಲ್ಲಿ ಶೇಕಡ 50ರಷ್ಟು ಸುಂಕವನ್ನು ವಿಧಿಸಲಾಗುತ್ತದೆ. ಆದೇಶದ ಪ್ರಕಾರ ಈ ಹೊಸ ದರವು 21 ದಿನಗಳಲ್ಲಿ ಅಂದರೆ ಆಗಸ್ಟ್ 27ರಿಂದ ಜಾರಿಗೆ ಬರಲಿದೆ. ಟ್ರಂಪ್ ಆದೇಶಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆಯನ್ನೂ ನೋಡಿದೆ. ರಷ್ಯಾದಿಂದ ಆಮದು ಮಾಡಿಕೊಳ್ಳುವ ಬಗ್ಗೆ ದೆಹಲಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಈ ಸುಂಕವು ‘ಅನ್ಯಾಯ, ನ್ಯಾಯಸಮ್ಮತವಲ್ಲ ಮತ್ತು ಅಸಮಂಜಸ’ ಆದ್ದರಿಂದ ಹಲವು ಇತರ ದೇಶಗಳು ತಮ್ಮ ಸ್ವಂತ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳಿಗಾಗಿ ಭಾರತದ ಮೇಲೆ ಹೆಚ್ಚುವರಿ ಸುಂಕಗಳನ್ನು ವಿಧಿಸಲು ಅಮೆರಿಕ ಆಯ್ಕೆ ಮಾಡುವುದು ಅತ್ಯಂತ ದುರದೃಷ್ಟಕರ. ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಸಂಕ್ಷಿಪ್ತ ಹೇಳಿಕೆಯಲ್ಲಿ ಹೇಳಲಾಗಿದೆ.
