ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರ್ಯಾಲಿ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ಹಿಂದೆ ಆಗಸ್ಟ್ 5ರಂದು ಈ ಪ್ರತಿಭಟನೆಯ ಯೋಜನೆ ಮಾಡಲಾಗಿತ್ತು. ಆದರೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಕಾರಣ ಪ್ರತಿಭಟನೆ ಮುಂದೂಡಲಾಯಿತು. ಶುಕ್ರವಾರ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಮತ ಕಳವು ವಿರುದ್ಧದ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಮಾತ್ರವಲ್ಲದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಭಾಗಿಯಾಗಲಿದ್ದಾರೆ.
