ಮತ ಕಳವು ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ಮುಂದಾಗಿರುವ ಭಾರತೀಯ ಚುನಾವಣಾ ಆಯೋಗವು (ECI) ಆಗಸ್ಟ್ 17ರ ಭಾನುವಾರದಂದು ಪತ್ರಿಕಾಗೋಷ್ಠಿ ನಡೆಸಲು ಮುಂದಾಗಿದೆ. “ಭಾರತೀಯ ಚುನಾವಣಾ ಆಯೋಗವು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ” ಎಂದು ಇಸಿಐ ತಿಳಿಸಿದೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ಕೆಲವು ಕ್ಷೇತ್ರಗಳ ಸಾಕ್ಷಿ ಸಹಿತ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ ಬಳಿಕ ಚುನಾವಣಾ ಆಯೋಗ ನಡೆಸುತ್ತಿರುವ ಮೊದಲ ಪತ್ರಿಕಾಗೋಷ್ಠಿ ಇದಾಗಿದೆ. ಪತ್ರಿಕಾ ಮಾಹಿತಿ ಬ್ಯೂರೋ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಸ್ಟಿಲ್ ಅಥವಾ ಟಿವಿ ಕ್ಯಾಮೆರಾಮನ್‌ಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.
