ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣ ಸಂಬಂಧ ಕೋರ್ಟ್ ನಟನಿಗೆ ತಾತ್ಕಾಲಿಕ ರಿಲೀಪ್ ನೀಡಿದೆ.
ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು, ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಎಂಬುವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್‌ನಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಧ್ರುವ ಸರ್ಜಾ ಅವರ ವಕೀಲರು ಈ ಸಂಬಂಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿರುವ ನ್ಯಾಯಾಲಯ ಧ್ರುವ ಸರ್ಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಈ ಪ್ರಕರಣ ಸಿವಿಲ್ ಮೊಕದ್ದಮೆಯಾಗಿದೆ, ಪೊಲೀಸರು ಇದನ್ನು ಕ್ರಿಮಿನಲ್ ಪ್ರಕರಣವಾಗಿ ದಾಖಲು ಮಾಡಿದ್ದಾರೆ ಎಂದು ಕೋರ್ಟ್ ಹೇಳಿದೆ. ಆ ಮೂಲಕ ಸದ್ಯದ ಮಟ್ಟಿಗೆ ಧ್ರುವ ಸರ್ಜಾ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಂತಾಗಿದೆ.