ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹಿಡಿಯಲು ಎಎಪಿ ಕಸರತ್ತ ನಡೆಸುತ್ತಿದೆ. ಎಎಪಿಯಿಂದ ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹವಣಿಸುತ್ತಿದ್ದರೆ, ತನ್ನ ನೆಲೆಯನ್ನು ಮರಳಿ ಪಡೆಯವ ಪ್ರಯತ್ನದಲ್ಲಿ ಕಾಂಗ್ರೆಸ್ ನಿರತವಾಗಿದೆ.
ಬುಧವಾರ ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6ರವರೆಗೆ ನಡೆಯಲಿದೆ. ಮತದಾನ ನಡೆಯುವ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 220 ಅರೆಮಿಲಿಟರಿ ಪಡೆ ತುಕಡಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ 35,626 ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ಪಡೆದ 19 ಸಾವಿರ ಮಂದಿ ಭದ್ರತಾ ಕಾರ್ಯಗಳಿಗೆ ನಿಯೋಜಿಸಲಾಗಿದೆ.

ದೆಹಲಿ ಚುನಾವಣೆ – ಯಾರಿಗೆ ಗದ್ದುಗೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: