ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಪ್ರಶ್ನಿಸಿ ಸಮುದಾಯಗಳು ಸಲ್ಲಿಸುವ ಅರ್ಜಿಯನ್ನು ಸೋಮವಾರ ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸದ್ಯಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.
ರಾಜ್ಯ ಒಕ್ಕಲಿಗರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಗಣತಿಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಅರ್ಜಿಯ ಪೂರ್ಣ ವಿಚಾರಣೆ ನಡೆಸಲಾಗುವುದು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಬಳಿಕ ನಾಳೆ ಲಿಖಿತ ವಾದಾಂಶ ಸಲ್ಲಿಕೆಗೆ ಎಲ್ಲ ಅರ್ಜಿದಾರರ, ಸರಕಾರಿ ವಕೀಲರಿಗೆ ಪೀಠ ಸೂಚನೆ ನೀಡಿ, ಸೆಪ್ಟೆಂಬರ್ 23 ಮಂಗಳವಾರಕ್ಕೆ ವಿಚಾರಣೆ ಮುಂದೂಡಿದೆ.