ಮನೆ ಕೆಲಸದ ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಲ್ಲದೇ, ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯ ಆದೇಶವನ್ನು ರದ್ದುಪಡಿಸಬೇಕು, ಪ್ರಕರಣದಿಂದ ಅರ್ಜಿದಾರರನ್ನು ಖುಲಾಸೆಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಇತ್ತೀಚೆಗಷ್ಟೇ ಅರ್ಜಿ ಸಲ್ಲಿಕೆಯಾಗಿದ್ದು, ಇನ್ನೂ ವಿಚಾರಣೆಗೆ ದಿನಾಂಕ ನಿಗದಿಯಾಗಬೇಕಾಗಿದೆ.
ಪ್ರಕರಣದಲ್ಲಿ ಅತ್ಯಾಚಾರಕ್ಕೊಳಗಾಗಿದ್ದೇನೆ ಎಂಬುದಾಗಿ ದೂರು ದಾಖಲಿಸಿರುವ ಮಹಿಳೆ ತೋಟದ ಮನೆಯಲ್ಲಿದ್ದ ಸಂದರ್ಭದಲ್ಲಿ ಪೊಲೀಸರು ಅಲ್ಲಿಗೆ ಬಂದಿದ್ದರು. ಪೊಲೀಸರನ್ನು ಕಂಡು ಭಯಭೀತಳಾಗಿ ಓಡಲು ಪ್ರಯತ್ನ ಮಾಡಿದ್ದೆ. ಈ ಸಂದರ್ಭದಲ್ಲಿ ಪೊಲೀಸರು ತನ್ನನ್ನು ಎಸ್ಐಟಿಗೆ ಕರೆತಂದು ದೂರು ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಅಂಶ ಸಂತ್ರಸ್ತೆಯನ್ನು ಪೊಲೀಸರು ಬೆನ್ನಟ್ಟಿ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ ಎಂಬುದು ಗೊತ್ತಾಗಲಿದೆ.
