ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 8 ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಇಂದು ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಇಂದು ಭಾರಿ ಮಳೆ ಸಾಧ್ಯತೆ ಹೆಚ್ಚಿದೆ. ಜೂ. 10 ರಿಂದ 12ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.