ಕಾಲ್ತುಳಿತ ದುರಂತದ ಬಗ್ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದು, “ಮಾತೇ ಬರುತ್ತಿಲ್ಲ, ಈ ಘಟನೆ ಕರುಳು ಹಿಂಡುತ್ತಿದೆ” ಅಂತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಆರ್‌ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿತ್ತು. ಈ ದುರಂತದಿಂದ ರಾಜ್ಯದಲ್ಲಿ ಸೂತಕದ ಛಾಯೆ ಆವರಿಸಿದೆ. ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ. ವಿಜಯೋತ್ಸವ ವೇಳೆ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.