ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರೊಂದಿಗೆ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಮೇಲೇರಿರುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಅಹಮದಾಬಾದ್‌ನ ಮೇಘನಿ ನಗರ ಬಳಿ ಪತನಗೊಂಡಿದ್ದು, ಹೊತ್ತಿ ಉರಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆ್ಯಂಬುಲೆನ್ಸ್‌ಗಳು ಸ್ಥಳಕ್ಕೆ ದಾವಿಸಿವೆ. ಹಲವು ಸಾವು ನೋವು ಸಂಭವಿಸಿರುವ ಸಾಧ್ಯತೆ ಇದೆ. ಕೆಲವು ಜನಪ್ರತಿನಿಧಿಗಳು ಇದ್ದರು ಎನ್ನಲಾಗಿದೆ.