ಇಸ್ರೇಲ್ ಮೇಲೆ ಗುರುವಾರ ಇರಾನ್ ಮತ್ತೊಂದು ಕ್ಷಿಪಣಿ ದಾಳಿ ನಡೆಸಿದ್ದು, ಇಸ್ರೇಲ್ ದೇಶದಲ್ಲಿ ವ್ಯಾಪಕ ಹಾನಿಯುಂಟಾಗಿದೆ. ದಕ್ಷಿಣ ಇಸ್ರೇಲ್‌ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಕಟ್ಟಡದ ಒಳಗಿದ್ದ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇಸ್ರೇಲಿ ಸರ್ಕಾರದ ವಕ್ತಾರರು ದಾಳಿಯನ್ನು ಖಚಿತಪಡಿಸಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಈ ಬಗ್ಗೆ ಮಾತನಾಡಿದ್ದು, “ಈ ದಾಳಿಗೆ ಇರಾನ್ ಭಾರಿ ಬೆಲೆ ತೆರಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.