ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೂ ತಲುಪಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೆಚ್ ಎಸ್ ಗೌರವ್ ಎಂಬವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ದಸರಾ ಹಬ್ಬ ಸೆಪ್ಟೆಂಬರ್ 22ರಿಂದ ಪ್ರಾರಂಭಗೊಳ್ಳಲಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾ. ಕೆ.ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲು ಮನವಿ ಮಾಡಿದ್ದಾರೆ. ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್ ಶುಕ್ರವಾರ (ಸೆ.19) ವಿಚಾರಣೆ ನಡೆಸುವುದಾಗಿ ಹೇಳಿದೆ.