ಏಷ್ಯಾಕಪ್ ಮುಕ್ತಾಯವಾಗುತ್ತಿದ್ದಂತೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಪಂದ್ಯಗಳ ತವರು
ಟೆಸ್ಟ್ ಸರಣಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ 15 ಸದಸ್ಯರುಗಳ ಭಾರತ ಟೆಸ್ಟ್ ತಂಡವನ್ನು ಘೋಷಿಸಿದೆ.
ಶುಭಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ ತಂಡದಲ್ಲಿ 7 ಆಟಗಾರರಿಗೆ ಸ್ಥಾನ ಲಭಿಸಿಲ್ಲ. ಕನ್ನಡಿಗ ದೇವದತ್ತ ಪಡಿಕ್ಕಲ್, ಎನ್. ಜಗದೀಶನ್ ಅವರಿಗೆ ಅವಕಾಶ ನೀಡಲಾಗಿದೆ. ಕರುಣ್ ನಾಯರ್, ಅಭಿಮನ್ಯು ಈಶ್ವರನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಂಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಪಂತ್ ಅಲಭ್ಯರಾಗಿದ್ದಾರೆ. ಉಪನಾಯಕರಾಗಿ ರವೀಂದ್ರ ಜಡೇಜಾ ಅವರನ್ನು ಹೆಸರಿಸಲಾಗಿದೆ.