ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ.
ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಖಾನೆಯಿಂದ ದಟ್ಟವಾದ ಹೊಗೆ ಕಂಡುಬಂದಿದೆ. ನಾಲ್ವರು ಗಾಯಗೊಂಡಿದ್ದಾರೆ.
ಒಳಗಿನಿಂದ ನಿರಂತರವಾಗಿ ಪಟಾಕಿಗಳ ಸ್ಫೋಟಗಳು ಕೇಳಿಬಂದವು. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.