ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೆ, ಚೂರಲ್‌ಮಲದಲ್ಲಿ 200ಕ್ಕೂ ಹೆಚ್ಚು ಜನರು ಸಾವಿಗೆ ಕಾರಣವಾಗಿದ್ದ ಮಾರಕ ಭೂಕುಸಿತ ಸಂಭವಿಸಿ ಒಂದು ವರ್ಷ ಕಳೆಯುವ ಮುನ್ನವೇ ಇದೇ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮತ್ತೆ ಪ್ರವಾಹ, ಭೂಕುಸಿತ ಸಂಭವಿಸುವ ಭೀತಿ ಎದುರಾಗಿದೆ.
ಚೂರಲ್‌ಮಲ ನದಿಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ನವೀಕರಣ ಕಾಮಗಾರಿಗಳಿಗಾಗಿ ನದಿ ದಂಡೆಯಲ್ಲಿ ಸಂಗ್ರಹಿಸಲಾದ ಮಣ್ಣು ಕೊಚ್ಚಿಹೋಗಿದೆ. ಅಟ್ಟಮಾಲ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ನುಗ್ಗಿದೆ.
ಚೂರಲ್ಮಲಾ ನದಿಯು ಉಕ್ಕಿ ಹರಿಯುತ್ತಿದ್ದು, ಕೆಸರಿನ ನೀರಿನೊಂದಿಗೆ ಬೈಲಿ ಸೇತುವೆ ಮೇಲೆ ಹರಿಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಬುಧವಾರ ವರದಿ ಮಾಡಿದ್ದಾರೆ. ನವೀಕರಣ ಕಾರ್ಯಕ್ಕಾಗಿ ನದಿಯ ಎರಡೂ ದಡಗಳಲ್ಲಿ ಸಂಗ್ರಹಿಸಲಾಗಿದ್ದ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಅಟ್ಟಮಲ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಹರಿಯುತ್ತಿದೆ.