ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಮೂರು ತಿಂಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
‘ಜೀವನದಲ್ಲಿ ಜೂನ್ 4ರ ದುರಂತಕ್ಕೆ ಯಾರೂ ನಿಜವಾಗಿಯೂ ಸಿದ್ಧರಿರುವುದಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿದ್ದ ದಿನ ದುರಂತವಾಗಿ ಮಾರ್ಪಟ್ಟಿತು. ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳ ಬಗ್ಗೆ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮಗೆ ಉಂಟಾದ ನಷ್ಟವು ಈಗ ನಮ್ಮ ಕಥೆಯ ಒಂದು ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ” ಎಂದು ಕೊಹ್ಲಿ ಹೇಳಿದ್ದನ್ನು ಆರ್ಸಿಬಿ ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದೆ.