ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಪ್ರವೇಶ ದ್ವಾರದ ಬಳಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಚೇರಿಯ ಕೆಲವು ಪಿಠೋಪಕರಣ, ಕಡತ ಹಾಗೂ ಹಳೆಯ ಫೋಟೊಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.
- Advertisement -
ಬೆಳಗ್ಗೆ 9.34ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ನಂದಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಹೇಳಿದ್ದಾರೆ. ವಿಧಾನಸಭೆಯ ಒಳ ಪ್ರವೇಶಿಸುವ ಪ್ರದೇಶದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ.




