ಬಸವನಬಾಗೇವಾಡಿ | ಸ್ಥಳೀಯ ಸರ್ಕಾರಗಳ ಚುನಾವಣೆ ನಡೆ‌ಸುವಂತೆ ಗ್ರಾಮ ಸ್ವರಾಜ್ ವೇದಿಕೆ ಆಗ್ರಹ

Date:

ರಾಜ್ಯದಲ್ಲಿ ಗ್ರಾಮ, ನಗರ ಪ್ರದೇಶಗಳಲ್ಲಿ ಆಡಳಿತ ನಡೆಸುವ ಸ್ಥಳೀಯ ಸರ್ಕಾರಕ್ಕಾಗಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸುವಂತೆ ಒತ್ತಾಯಿಸಿ ಗ್ರಾಮ ಸ್ವರಾಜ್ ಕರ್ನಾಟಕ ವೇದಿಕೆಯಿಂದ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಗ್ರಾಮ ಪಂಚಾಯತ್ ಮಹಾ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಪಾಟೀಲ ನಾಗರದಿನ್ನಿ ಮಾತನಾಡಿ, “ವಿಶ್ವಕ್ಕೆ ಪ್ರಪ್ರಥಮ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಣ್ಣ ಅವರ ನಾಡಿನಲ್ಲಿ, ಮಹಾತ್ಮಾ ಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯ ಹಾಗೂ ಬಿ ಆರ್ ಅಂಬೇಡ್ಕರ್ ಅವರ ಸಮ ಸಮಾಜದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮೂರು ಹಂತದ ಪಂಚಾಯತ್ ಚುನಾವಣೆಗಳನ್ನು ವಿಳಂಬ ಮಾಡದೆ ನಡೆಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

“ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ನೇಮಕಗೊಂಡಿರುವ ಆಡಳಿತಾಧಿಕಾರಿಗಳು ಕಡ್ಡಾಯವಾಗಿ ಗ್ರಾಮಸಭೆಗಳನ್ನು ನಡೆಸಬೇಕು. ಗ್ರಾಮಸಭೆಯಲ್ಲಿ ಕೈಗೊಳ್ಳುವ ನಿರ್ಣಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕ್ರಿಯಾ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು” ಎಂದು ಮನವಿಯಲ್ಲಿ ಒತ್ತಾಯಿಸಿದರು.

ಇದನ್ನೂ ಓದಿದ್ದೀರಾ? ಶಹಾಪುರದಲ್ಲಿ ಎಸ್‌ಐಆರ್ ವಿರೋಧಿ ಹೋರಾಟದ ಕಹಳೆ; ಬೈಕ್ ರ‍್ಯಾಲಿ ಮೂಲಕ ಜನಜಾಗೃತಿ

ಈ ಸಂದರ್ಭದಲ್ಲಿ ಗ್ರಾಮ ಸ್ವರಾಜ್ ಕರ್ನಾಟಕ ವೇದಿಕೆಯ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕಲ್ಲು ದೇಸಾಯಿ, ತಾನಾಜಿ ನಾಗರಾಳ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಗನಾಚಾರಿ, ಶ್ರೀಕಾಂತ್ ಗಣಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ...

ಅಂಕೋಲಾ | ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆ: 7 ಮಂದಿ ವಿರುದ್ಧ ದೂರು ದಾಖಲು

ಜೆಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕ್ರೇಟಾ ಕಾರಿನಲ್ಲಿ ಬಂದ ಐವರು ಅಡ್ಡಗಟ್ಟಿ,...

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು,...