PTI V/s ANI : ಡಿ ಕೆ ಸುರೇಶ್ ಎದುರೇ ವರದಿಗಾರ್ತಿ ಮೇಲೆ ಹಲ್ಲೆಗೈದ ಪತ್ರಕರ್ತ: ವಿಡಿಯೋ ವೈರಲ್

Date:

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಲೆಂದು ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ರಾಷ್ಟ್ರೀಯ ಸುದ್ದಿ ಸಂಸ್ಥೆಯಾಗಿರುವ ಪಿಟಿಐ ಪತ್ರಕರ್ತೆಯ ಮೇಲೆ ಎಎನ್‌ಐ ಸುದ್ದಿ ಸಂಸ್ಥೆಯ ಪತ್ರಕರ್ತನೋರ್ವ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿರುವ ಪಿಟಿಐ ಸುದ್ದಿ ಸಂಸ್ಥೆ, ಎಎನ್‌ಐ ಪತ್ರಕರ್ತನ ನಡವಳಿಕೆಯನ್ನು ಖಂಡಿಸಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದೆ.

ತನ್ನ ಟ್ವೀಟ್‌ನಲ್ಲಿ ಪಿಟಿಐ, “ಎಎನ್‌ಐ ಪತ್ರಕರ್ತನಿಂದ ಅಸಹ್ಯಕರ ನಡವಳಿಕೆ ಇದು. ಡಿ ಕೆ ಶಿವಕುಮಾರ್ ಹಾಗೂ ಡಿ ಕೆ ಸುರೇಶ್ ಅವರಿದ್ದ ಕಾರ್ಯಕ್ರಮವೊಂದರಲ್ಲಿ ಯುವ ಪಿಟಿಐ ಮಹಿಳಾ ವರದಿಗಾರ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಲೈಂಗಿಕ ಕಿರುಕುಳ ನೀಡಿದ್ದಾನೆ” ಎಂದು ಆರೋಪಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಲ್ಲದೇ, ಎಎನ್‌ಐಯ ನಿರ್ದೇಶಕಿ ಸ್ಮಿತಾಪ್ರಕಾಶ್ ಅವರನ್ನು ಟ್ಯಾಗ್ ಮಾಡಿರುವ ಪಿಟಿಐ, “ನಿಮ್ಮ ಸಿಬ್ಬಂದಿಯ ಇಂತಹ ವರ್ತನೆಯನ್ನು ಒಪ್ಪುತ್ತೀರಾ?” ಎಂದು ಪ್ರಶ್ನಿಸಿದೆ.

“ಪಿಟಿಐ ತನ್ನ ಉದ್ಯೋಗಿಗಳನ್ನು ರಕ್ಷಿಸಲು ಯಾವ ಹಂತಕ್ಕೂ ಹೋಗಲಿದೆ. ಹಲ್ಲೆಯಿಂದಾಗಿ ನಮ್ಮ ವರದಿಗಾರ್ತಿಯು ಆಘಾತಕ್ಕೊಳಗಾಗಿದ್ದಾರೆ. ಘಟನೆಯ ಕುರಿತು ಎಫ್‌ಐಆರ್ ದಾಖಲಿಸಲಿದ್ದೇವೆ. ಅಲ್ಲದೇ, ಪಿಟಿಐ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ನೀಡಲಿದೆ” ಎಂದು ತಿಳಿಸಿದೆ.

ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಲೆಂದು ಇಂದು ರಾಮನಗರದಲ್ಲಿ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಪತ್ರಕರ್ತರ ಜೊತೆಗೆ ತೆರೆದ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಸ್ಥಳೀಯ ಹಲವು ಮಂದಿ ಪತ್ರಕರ್ತರೂ ಸೇರಿ ರಾಷ್ಟ್ರೀಯ ಮಾಧ್ಯಮದ ಪತ್ರಕರ್ತರು ಕೂಡ ವಾಹನದಲ್ಲಿದ್ದರು. ಈ ನಡುವೆ ‘ಬೈಟ್ಸ್‌’ ಪಡೆದುಕೊಳ್ಳುವ ವಿಚಾರವಾಗಿ ಎಎನ್‌ಐ ಪತ್ರಕರ್ತ ಹಾಗೂ ಪಿಟಿಐ ಪತ್ರಕರ್ತೆಯ ನಡುವೆ ವಾಗ್ವಾದ ನಡೆದಿದೆ.

ಈ ವಾಗ್ವಾದದ ಮಧ್ಯೆಯೇ ಎಎನ್‌ಐ ಪತ್ರಕರ್ತ ವರದಿಗಾರ್ತಿಗೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಹಲ್ಲೆಯ ವೇಳೆ ಸ್ಥಳದಲ್ಲಿದ್ದ ಡಿ ಕೆ ಸುರೇಶ್ ಅವರ ಬೆಂಬಲಿಗರು ಎಎನ್‌ಐ ಪತ್ರಕರ್ತನನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ದೃಶ್ಯವು ವಿಡಿಯೋದಲ್ಲಿದೆ. ಈ ಘಟನೆಯನ್ನು ದೇಶದ ನಾನಾ ಪತ್ರಕರ್ತರು ಖಂಡಿಸಿದ್ದು, ಈ ರೀತಿಯ ವರ್ತನೆ ಸರಿಯಲ್ಲ. ತಪ್ಪು ಯಾರೇ ಮಾಡಿದರೂ ತಪ್ಪು ಎಂದು ಅಭಿಪ್ರಾಯಿಸಿದ್ದಾರೆ.

ಈ ಘಟನೆಯ ಬಗ್ಗೆ ಎಎನ್‌ಐ ಸುದ್ದಿಯ ನಿರ್ದೇಶಕಿ ಸ್ಮಿತಾ ಪ್ರಕಾಶ್ ಅವರನ್ನು ಈ ದಿನ.ಕಾಮ್ ಸಂಪರ್ಕಿಸಿತು. “ಘಟನೆಯ ಮಾಹಿತಿ ದೊರಕಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಸಂಸ್ಥೆಯಿಂದ ಅಧಿಕೃತ ಪ್ರಕಟಣೆ ಹೊರಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...