ಬೆಂಗಳೂರು ಗ್ರಾಮಾಂತರ | ನಾಳೆ ರಾಮನಗರದಲ್ಲಿ ನಾಮಪತ್ರ ಸಲ್ಲಿಸಲಿರುವ ಡಿ ಕೆ ಸುರೇಶ್

Date:

Advertisements

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್, ಮಾ.28ರಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈ ಬಗ್ಗೆ ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಗೃಹ ಸಚಿವರಾದ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.

“ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ” ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

Advertisements

ಕ್ಷೇತ್ರದಲ್ಲಿ ಅನ್ಯ ಪಕ್ಷಗಳ ಕಾರ್ಯಕರ್ತರ ಸೇರ್ಪಡೆ ಬಗ್ಗೆ ಕೇಳಿದಾಗ, “ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಬಹಳ ಉತ್ಸಾಹದಿಂದ ನನಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ” ಎಂದರು.

ನಿಶಾ ಯೋಗೇಶ್ವರ್ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ

ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು: ಮೋದಿಗೆ ಶರದ್ ಪವಾರ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ...

ಮೋದಿ ಸಂಪುಟದಲ್ಲಿ ಶಿಂದೆ, ಅಜಿತ್ ಬಣಕ್ಕಿಲ್ಲ ಸ್ಥಾನ; ಶಿವಸೇನೆ ಸಂಸದ ಅಸಮಾಧಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ...

Download Eedina App Android / iOS

X