ಬಳ್ಳಾರಿ | ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ತುಕಾರಾಂ ಬಹುತೇಕ ಖಚಿತ: ಶ್ರೀರಾಮುಲುವಿಗೆ ಠಕ್ಕರ್

Date:

ಈ ಬಾರಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಂಡೂರು ಶಾಸಕ, ಮಾಜಿ ಸಚಿವ ಈ.ತುಕಾರಾಂ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಬಹುತೇಕ ನಿರ್ಧರಿಸಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

- Advertisement -

ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಠಕ್ಕರ್ ಕೊಡಲು ಶಾಸಕ ಈ.ತುಕಾರಾಂ ಅವರು ತಮ್ಮ ಪುತ್ರಿಯನ್ನು ಕಣಕ್ಕಿಳಿಸಲು ಬಯಸಿದ್ದರು. ಆದರೆ ಪಕ್ಷ ತುಕಾರಾಂ ಅವರನ್ನೇ ಕಣಕ್ಕಿಳಿಯುವಂತೆ ತೀವ್ರ ಒತ್ತಡ ತಂದಿತ್ತು. ತುಕಾರಾಂ ಅವರಿಗಿಂತ ಅವರ ರಾಜಕೀಯ ಸೂತ್ರಧಾರ ಸಂತೋಷ್ ಲಾಡ್ ಅವರ ಮೇಲೆ ಸಹ ಒತ್ತಡವಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಕರಾಂ ಅವರಿಗೆ ನೀನು ಅಭ್ಯರ್ಥಿಯಾಗಲು ಒಪ್ಪಲೇಬೇಕೆಂದು ಹಠ ಹಿಡಿದು ಇಂದು ಬೆಂಗಳೂರಿಗೆ ಕರೆಸಿ, ಸಚಿವರಾದ ಸಂತೋಷ್ ಲಾಡ್, ಬಿ.ನಾಗೇಂದ್ರ, ಝಮೀರ್ ಅಹಮ್ಮದ್ , ಮಾಜಿ ಎಂಎಲ್ ಸಿ ಕೆ‌ಎಸ್.ಎಲ್ ಸ್ವಾಮಿ, ಇಬ್ಬರು ಜಿಲ್ಲಾಧ್ಯಕ್ಷರಾದ ಮಹಮ್ಮದ್ ರಫೀಕ್, ಬಿ.ವಿ.ಶಿವಯೋಗಿ ಮೊದಲಾದವರು ಸೇರಿ ತುಕರಾಂ ಅವರಿಗೆ ಸ್ಪರ್ಧೆ ಮಾಡಲು ಒಪ್ಪಿಸಿರುವುದಾಗಿ ತಿಳಿದುಬಂದಿದೆ.

ತುಕಾರಾಂ ಅವರು ವಿಜಯಿಯಾಗಿ ಲೋಕಸಭೆಗೆ ಹೋದರೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅವರ ಪುತ್ರಿಗೆ ಟಿಕೆಟ್ ನೀಡುವ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚೆ ನಡೆದಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...