ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ್‌ ಹೆಗ್ಡೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Date:

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರಿಂದ ಪರಸ್ಪರ ವಾಕ್ಸಮರ ಕೂಡ ನಡೆಯುತ್ತಿದೆ. ಈ ನಡುವೆ ರಾಜಕೀಯ ನಾಯಕರುಗಳ ಹೇಳಿಕೆಗಳ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೂಡ ಸಲ್ಲಿಕೆಯಾಗುತ್ತಿದೆ.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಬರುವುದಿಲ್ಲ. ಅವರಿಗೆ ಮತ ಹಾಕಬೇಡಿ ಎಂದು ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಅಲ್ಲದೆ, “ಆಪರೇಷನ್ ಕಮಲ ನಡೆಯುತ್ತಿದ್ದು, ಕಾಂಗ್ರೆಸ್‌ ಶಾಸಕರಿಗೆ ₹50 ಕೋಟಿ ರೂಪಾಯಿ ಆಫರ್‌ ಮಾಡಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧವೂ ಬಿಜೆಪಿಯಿಂದ ದೂರು ನೀಡಲಾಗಿದೆ.

ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ, ವಕ್ತಾರ ಪ್ರಕಾಶ್, ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ್ ಕುಮಾರ್ ಜತೆಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಯಪ್ರಕಾಶ್‌ ಹೆಗ್ಡೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ.

ಬಿಜೆಪಿ ನೀಡಿರುವ ದೂರಿನಲ್ಲೇನಿದೆ?

22.03.2024 ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡುವಾಗ, “ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ” ಎಂದು ಹೇಳುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುತ್ತಾರೆ.

ಜಯಪ್ರಕಾಶ್ ಹೆಗ್ಡೆಯವರ ಹೇಳಿಕೆಯು ದಿನಾಂಕ: 23.03.2024 ರ ಕನ್ನಡ ದಿನಪತ್ರಿಕೆಯಲ್ಲಿ, “ಕೋಟಗೆ ಹಿಂದಿ, ಇಂಗ್ಲಿಷ್ ಬರಲ್ಲ, ಗೆಲ್ಲಿಸಬೇಡಿ” ಎಂಬ ಶೀರ್ಷಿಕೆಯಡಿ ಪ್ರಕಟವಾಗಿರುತ್ತದೆ. ಸದರಿ ಹೇಳಿಕೆಯು ಭಾಷಾ ಸಾಮರಸ್ಯವನ್ನು ಹದಗೆಡಿಸುವ ಹಾಗೂ ಕನ್ನಡಿಗರ ಅಸ್ಮಿತೆಗೆ ಧಕ್ಕೆ ತರುವುದಲ್ಲದೆ ಪ್ರಾದೇಶಿಕ ಭಾಷೆಯ ಬಗ್ಗೆ ಅವಮಾನಕರ ಹೇಳಿಕೆಯಾಗಿರುತ್ತದೆ.

ಆದ್ದರಿಂದ ಭಾಷೆಯ ಹೆಸರಿನಲ್ಲಿ ಮತಯಾಚಿಸಿ ಪ್ರತಿಸ್ಪರ್ಧಿಯನ್ನು ಗೆಲ್ಲಿಸಬೇಡಿ ಎಂದು ಹೇಳಿಕೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ‌ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ವಿನಂತಿ” ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಪತನ: ಜಗದೀಶ್ ಶೆಟ್ಟರ್

ಸಿಎಂ ಸಿದ್ದರಾಮಯ್ಯ ಅವರು ಆಪರೇಷನ್ ಕಮಲ ನಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಅವರ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಒಡ್ಡುತ್ತಿದೆ ಎಂದು ಆಧಾರ ರಹಿತವಾಗಿ ಸುಳ್ಳು ಹೇಳಿದ್ದಾರೆ. ಇವರ ಹೇಳಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ದೂರು ಸಲ್ಲಿಸಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...