ಲೋಕಸಭಾ ಚುನಾವಣೆ | ‘1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ. ಭಿಕ್ಷೆ’ ಎಂದಿದ್ದ ನಟಿ ಕಂಗನಾಗೆ ಬಿಜೆಪಿ ಟಿಕೆಟ್!

Date:

“1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ. ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ” ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ, ಬಲಪಂಥೀಯ ಚಿಂತನೆ ಹೊಂದಿರುವ ಬಾಲಿವುಡ್‌ನ ನಟಿ  ಕಂಗನಾ ರಣಾವತ್‌ಗೆ ಬಿಜೆಪಿ ಟಿಕೆಟ್ ನೀಡಿದೆ.

ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಹೆಸರಿಸಿದೆ.

ನಟಿ ಕಂಗನಾ ರಣಾವತ್ ಮಾ.23ರಂದು ತಮ್ಮ 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹಿಮಾಚಲ ಪ್ರದೇಶದ ಮಂಡಿ ನಿವಾಸಿಯಾಗಿರುವ ಈಕೆಗೆ ಬಿಜೆಪಿ ಹೈಕಮಾಂಡ್ ಮಂಡಿ ಲೋಕಸಭಾ ಕ್ಷೇತ್ರದಿಂದಲೇ ಟಿಕೆಟ್ ನೀಡಿದೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದ ಕಂಗನಾ, ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಾಗುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅವರು ಇಮ್ರಾನ್ ಹಶ್ಮಿ ಮತ್ತು ಶೈನಿ ಅಹುಜಾ ಅವರೊಂದಿಗೆ 2006ರಲ್ಲಿ ‘ಗ್ಯಾಂಗ್‌ಸ್ಟರ್’ ಸಿನಿಮಾದ ಮೂಲಕ ತಮ್ಮ ವೃತ್ತಿಜೀವನ ಪ್ರಾರಂಭಿಸಿದ್ದ ಕಂಗನಾ, ಇತ್ತೀಚಿಗೆ ‘ತೇಜಸ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇತ್ತೀಚಿನ ಹಲವು ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ಮಾಡುವಲ್ಲಿ ಸಂಪೂರ್ಣ ವಿಫಲಗೊಂಡಿತ್ತು. ಈ ನಡುವೆ ಅವರು ರಾಜಕೀಯಕ್ಕೆ ಕಾಲಿಟ್ಟಿದ್ದು, ಬಿಜೆಪಿಯ ಟಿಕೆಟ್ ಪಡೆದಿದ್ದಾರೆ.

ಉಳಿದಂತೆ ಇಂದು ಬಿಜೆಪಿ ಸೇರಿದ ಕೈಗಾರಿಕೋದ್ಯಮಿ ಮತ್ತು ಕಾಂಗ್ರೆಸ್‌ನ ಮಾಜಿ ಸಂಸದ ನವೀನ್ ಜಿಂದಾಲ್ ಅವರನ್ನು ಹರಿಯಾಣದ ಕುರುಕ್ಷೇತ್ರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಉತ್ತರ ಪ್ರದೇಶದ ಪಿಲಿಭಿತ್‌ನಿಂದ ವರುಣ್‌ ಗಾಂಧಿಯನ್ನು ಕೈಬಿಟ್ಟಿದ್ದು, ಮಾಜಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರಿಗೆ ಟಿಕೆಟ್ ನೀಡಿದೆ.ವರುಣ್ ಅವರ ತಾಯಿ ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರನ್ನು ಸುಲ್ತಾನ್‌ಪುರದಿಂದ ಬಿಜೆಪಿ ಕಣಕ್ಕಿಳಿಸುತ್ತಿದೆ.

ಇದನ್ನು ಓದಿದ್ದೀರಾ? ಬಿಜೆಪಿಯ 5ನೇ ಪಟ್ಟಿ ಪ್ರಕಟ | ಅನಂತ್‌ ಕುಮಾರ್‌ ಹೆಗಡೆಗಿಲ್ಲ ಟಿಕೆಟ್; ಜಗದೀಶ್ ಶೆಟ್ಟರ್‌ಗೆ ಬೆಳಗಾವಿ

ಇದಲ್ಲದೇ, ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ಬಿಜೆಪಿ ಸೇರಿದ್ದ ನ್ಯಾಯಮೂರ್ತಿ ಅಭಿಜಿತ್ ಗಂಗೂಲಿ ಅವರಿಗೆ ಪಶ್ಚಿಮ ಬಂಗಾಳದ ತಮ್ಮುಕ್‌ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ದಕ್ಷಿಣ ಗೋವಾದಿಂದ ಅಚ್ಚರಿ ಅಭ್ಯರ್ಥಿಯಾಗಿ ಡೆಂಪೋ ಇಂಡಸ್ಟ್ರೀಸ್ ನಿರ್ದೇಶಕಿ ಪಲ್ಲವಿ ಶ್ರೀನಿವಾಸ್ ಡೆಂಪೋ ಅವರಿಗೆ ಬಿಜೆಪಿಯು ಟಿಕೆಟ್ ನೀಡಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾನನಷ್ಟ ಆರೋಪ: ಬಿಜೆಪಿ, ಚುನಾವಣಾ ಆಯೋಗಕ್ಕೆ ನೋಟಿಸ್ ಕಳುಹಿಸಿದ ಟಿಎಂಸಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ...

ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

ಗೌತಮ್ ಅದಾನಿ ಮತ್ತು ಮುಕೇಶ್ ಅಂಬಾನಿಯಂತಹ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡಲು ನರೇಂದ್ರ...

ಮೋದಿ ಸುಳ್ಳುಗಳು | ಶೋಷಣೆಯಿಂದ ಮುಕ್ತಿ ನೀಡದ ಮೋದಿ, ಬುಡಕಟ್ಟುಗಳ ಅಭಿವೃದ್ಧಿಗೆ ನಿಲ್ಲುತ್ತಾರೆಯೇ?  

ಜಾರ್ಖಂಡ್‌ನ ದುಮ್ಕಾದಲ್ಲಿ ಇಂದು ನಡೆದ ಸಾರ್ವಜನಿಕ  ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ...

ಮೋದಿ ವಿರುದ್ಧ ಎದೆ ಸೆಟೆಸಿದ ಪಂಜಾಬ್ ಪುನಃ ಕೇಜ್ರೀವಾಲರ ಪೊರಕೆ ಹಿಡಿಯುವುದೇ?

ದೇಶದಲ್ಲೇ ಅತಿ ಹೆಚ್ಚು ಶೇಕಡಾವಾರು ದಲಿತರಿರುವ ಈ ರಾಜ್ಯದ 13 ಸೀಟುಗಳು...