ಬಿಜೆಪಿಯ 5ನೇ ಪಟ್ಟಿ ಪ್ರಕಟ | ಅನಂತ್‌ ಕುಮಾರ್‌ ಹೆಗಡೆಗಿಲ್ಲ ಟಿಕೆಟ್; ಜಗದೀಶ್ ಶೆಟ್ಟರ್‌ಗೆ ಬೆಳಗಾವಿ

Date:

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯು ಭಾನುವಾರ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕದಲ್ಲಿ ಬಾಕಿ ಇರಿಸಿದ್ದ ಐದು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಲು ಭಾರೀ ಪ್ರಯತ್ನ ನಡೆಸಿದ್ದ ಆರು ಬಾರಿಯ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿಯ ಮುಖಂಡ ಅನಂತ್‌ ಕುಮಾರ್‌ ಹೆಗಡೆಯವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಆ ಮೂಲಕ ದ್ವೇಷ ಭಾಷಣದ ಮೂಲಕವೇ ಸುದ್ದಿಯಾಗುತ್ತಿದ್ದ ಮುಖಂಡನಿಗೆ ಭಾರೀ ಶಾಕ್ ನೀಡಿದೆ. ಅನಂತ್‌ಕುಮಾರ್ ಹೆಗಡೆಯ ಬದಲಿಗೆ ಮಾಜಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಿದೆ.

ಉಳಿದಂತೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಪಡೆಯುವಲ್ಲಿ ಕಾಂಗ್ರೆಸ್‌ಗೆ ‘ಕೈ’ ಕೊಟ್ಟು ದಿಢೀರನೆ ಬಿಜೆಪಿ ಸೇರುವ ಮೂಲಕ ಘರ್ ವಾಪ್ಸಿ ಆಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕೊನೆಗೂ ಯಶಸ್ವಿಯಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿಕ್ಕಬಳ್ಳಾಪುರದಿಂದ ನಿರೀಕ್ಷೆಯಂತೆಯೇ ಮಾಜಿ ಸಚಿವ ಕೆ ಸುಧಾಕರ್ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ್ ನಾಯಕ ಅವರು ಟಿಕೆಟ್ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ ಬಿಜೆಪಿ ಟಿಕೆಟ್ ‘ಪೆಂಡಿಂಗ್’:

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲ ಇನ್ನೂ ಮುಂದುವರಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್​ಗಾಗಿ ಭಾರೀ ಕಸರತ್ತು ನಡೆಯುತ್ತಿದೆ. ಆದರೆ, ಕಾರಜೋಳ ಅವರಿಗೆ ಟಿಕೆಟ್ ನೀಡದಂತೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ, ರಾಜ್ಯ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಿ ಟಿಕೆಟ್ ಘೋಷಿಸಲು ಹೈಕಮಾಂಡ್ ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಬಿಜೆಪಿ ಅಭ್ಯರ್ಥಿಯನ್ನು ಕಲ್ಲೆಸೆದು ಓಡಿಸಿದ ಆಕ್ರೋಶಿತ ಜನರ ಗುಂಪು; ವಿಡಿಯೋ ವೈರಲ್

ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನದ ವೇಳೆ ಪಶ್ಚಿಮಬಂಗಾಳದಲ್ಲಿ ಆಕ್ರೋಶಿತ ಜನರ...

ಮೋದಿ ಸುಳ್ಳುಗಳು | ಯಾರನ್ನೂ ವಿಶೇಷ ಪ್ರಜೆಗಳೆಂದು ಒಪ್ಪಿಕೊಳ್ಳದೆ, ಎಲ್ಲರನ್ನೂ ಸಮಾನಾಗಿ ಕಾಣುತ್ತಾರೆಯೇ ಮೋದಿ?

ಪಂಜಾಬ್‌ನ ಜಲಂಧರ್‌ನಲ್ಲಿ ನಡೆದ ಮೆಗಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಮಾತನಾಡಿ, "ಜನರು...

ಇಂಡಿಯಾ ಒಕ್ಕೂಟವು ಮತ ಬ್ಯಾಂಕ್‌ಗಾಗಿ ‘ಮುಜ್ರಾ ನೃತ್ಯ’ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಇಂಡಿಯಾ ಮೈತ್ರಿಕೂಟದ ನಾಯಕರು ತಮ್ಮ ಮತ ಬ್ಯಾಂಕ್‌ಗಾಗಿ 'ಮುಜ್ರಾ' (ಒಂದು ಪ್ರಕಾರದ...

ಪಂಜಾಬ್‌ನಲ್ಲಿ ಪ್ರಧಾನಿ | ಪ್ರತಿಭಟನೆಗೆ ಹೆದರಿದ ಮೋದಿ; ರೈತ ಮುಖಂಡರಿಗೆ ಗೃಹಬಂಧನ

ರೈತ ಹೋರಾಟದ ಸೆಲೆ ಚಿಮ್ಮಿದ್ದ ಪಂಜಾಬ್‌ನಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ....