‘ಸಿದ್ದರಾಮಯ್ಯ ಗರ್ವಭಂಗ ಮಾಡುತ್ತೇನೆ’ ಎಂದಿದ್ದ ದೇವೇಗೌಡರಿಗೆ ತುಮಕೂರಿನಲ್ಲಿ ಮುಖಭಂಗ!

Date:

ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಗರ್ವಭಂಗ ಮಾಡುತ್ತೇನೆ ಎಂದಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ತುಮಕೂರಿನಲ್ಲಿ ಮುಖಭಂಗವಾಗಿದೆ.

ತುಮಕೂರಿನಲ್ಲಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್‌ನ ಜಿಲ್ಲಾ ಮಟ್ಟದ ಪ್ರಮುಖ ನಾಯಕರ ಸಭೆಯನ್ನು ಶನಿವಾರ ಕರೆಯಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಲು ಜೆಡಿಎಸ್ ಕಾರ್ಯಕರ್ತರು ನಿರಾಸಕ್ತಿ ತೋರಿದ್ದರಿಂದ ಚೇರುಗಳೆಲ್ಲವೂ ಖಾಲಿ-ಖಾಲಿಯಾಗಿತ್ತು.

ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿರುವ ವಿ. ಸೋಮಣ್ಣ ಪರ ಚುನಾವಣಾ ಪ್ರಚಾರ ನಡೆಸುವ ವಿಚಾರವಾಗಿ ಜಿಲ್ಲಾಮಟ್ಟದ ಸಭೆಯನ್ನು ತುಮಕೂರು ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿತ್ತು. ಆದರೆ, ಈ ಸಭೆಯು ಕಾರ್ಯಕರ್ತರಿಲ್ಲದೆ ಬಣ-ಬಣ ಎನ್ನುತ್ತಿತ್ತು. ಕುರ್ಚಿಗಳೆಲ್ಲವೂ ಖಾಲಿಖಾಲಿಯಾಗಿ ಎದ್ದು ಕಾಣುತ್ತಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ನಡುವೆ ಅಭ್ಯರ್ಥಿ ಸೋಮಣ್ಣ ಭಾಷಣ ಮಾಡುತ್ತಿದ್ದಾಗ, ಸಭೆಗೆ ಬಂದಿದ್ದ ಕೆಲವು ಕಾರ್ಯಕರ್ತರು ಎದ್ದು ಹೋಗುತ್ತಿದ್ದರು. ಈ ವೇಳೆ ಎದ್ದು ಹೋಗದಂತೆ ವಿ ಸೋಮಣ್ಣ ಮನವಿ ಮಾಡಿದರು. ಸೋಮಣ್ಣ ಮನವಿಗೂ ಕಿವಿಗೊಡದ ಜೆಡಿಎಸ್ ಕಾರ್ಯಕರ್ತರು, ಎದ್ದು ಹೋಗುತ್ತಲೇ ಇದ್ದರು. ಮಾಜಿ ಪ್ರಧಾನಿ ದೇವೇಗೌಡರು ಇದ್ದಂತಹ ಸಭೆಯಲ್ಲೇ ಕಾರ್ಯಕರ್ತರಿಲ್ಲದ್ದರಿಂದ ಮುಖಭಂಗ ಅನುಭವಿಸಿದರು.

ಈ ಸಭೆಯಲ್ಲಿ ಗೋಪಾಲಯ್ಯ, ಎಂ.ಟಿ ಕೃಷ್ಣಪ್ಪ, ಟಿ. ನಾಗರಾಜಯ್ಯ, ತಿಮ್ಮರಾಯಪ್ಪ, ವೀರಭದ್ರಯ್ಯ, ಹುಲಿನಾಯ್ಕರ್, ವೈ.ಎ ನಾರಾಯಣಸ್ವಾಮಿ ಸೇರಿ ಹಲವರು ಸಭೆಯಲ್ಲಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕರ್ನಾಟಕದ jds-bjp ಮೈತ್ರಿಯ jds ಪಕ್ಷದ 3 ಕ್ಷೇತ್ರಗಳಲ್ಲಿ ಗೆಲ್ಲುವುದು ಒಂದೇ ಒಂದು ಕ್ಷೇತ್ರ ಮಾತ್ರ,, ಮಾಜಿ ಪ್ರಧಾನಿ
    H ದೇವೆಗೌಡರು ಸ್ವತ 3 ಕ್ಷೇತ್ರಗಳಲ್ಲಿ ನಿಂತು ಕೊಂಡ್ರು ಗೆಲ್ಲಲು ಸಾಧ್ಯವಿಲ್ಲ. ಕಾರಣ ಭ್ರಷ್ಟರ ಪರ ಕೈ ಜೋಡಿಸಿದ್ದಾರೆ ಮಾಜಿ ಪ್ರಧಾನಿ ಅವರು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ರಾಮನವಮಿ | ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್ ಪ್ರಾರಂಭಿಸಿದ ಎಎಪಿ

ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ...