ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

Date:

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 19ರ ಬೆಳಗ್ಗೆ 7 ರಿಂದ ಜೂನ್ 1ರ ಸಂಜೆ 6.30ರವರೆಗೆ ಎಕ್ಸಿಟ್ ಪೋಲ್(Exit Poll)ನ ಫಲಿತಾಂಶಗಳನ್ನು ಪ್ರಕಟಿಸುವುದಕ್ಕೆ ಚುನಾವಣಾ ಆಯೋಗವು ನಿರ್ಬಂಧ ಹೇರಿದೆ.

- Advertisement -

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಚುನಾವಣಾ ಆಯೋಗವು, “ಮತದಾನ ಪ್ರಕ್ರಿಯೆಯ ಬಳಿಕ ನಡೆಸಲಾಗುವ ಮತದಾನೋತ್ತರ ಸಮೀಕ್ಷೆಗಳನ್ನು ನಡೆಸದಂತೆ ಹಾಗೂ ಅವುಗಳ ಫಲಿತಾಂಶಗಳನ್ನು ಪ್ರಕಟಿಸಬಾರದು” ಎಂದು 1951 ರ ಜನತಾ ಪ್ರಾತಿನಿಧ್ಯ ಕಾಯಿದೆ (ಆರ್‌ಪಿಎಕ್ಟ್) ಅನ್ನು ಉಲ್ಲೇಖಿಸಿ ನಿರ್ಬಂಧ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಸುದ್ದಿ ಬ್ಯೂರೋಗಳು, ಮಾಧ್ಯಮ ಸಂಸ್ಥೆಗಳು, ರೇಡಿಯೋ ಮತ್ತು ದೂರದರ್ಶನ ಚಾನೆಲ್‌ಗಳು ಮತದಾನದ ಬಳಿಕ ಸಂಗ್ರಹಿಸುವ ಯಾವುದೇ ಅಭಿಪ್ರಾಯ ಅಥವಾ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಸಾರ ಮಾಡುವಂತಿಲ್ಲ” ಎಂದು ತಿಳಿಸಿದೆ.

ಲೋಕಸಭಾ ಚುನಾವಣೆಯು ಏಪ್ರಿಲ್ 19ರಿಂದ ಜೂನ್ 1ರ ನಡುವೆ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು, ಭರ್ಜರಿ ಮತದಾನ ನಡೆದಿದೆ. ಬಿಸಿ ಗಾಳಿಯ ನಡುವೆಯೂ ಭಾರೀ ಪ್ರಮಾಣದಲ್ಲಿ ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. 21 ರಾಜ್ಯದ 102 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯ ಕಂಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...