ಚಿತ್ರದುರ್ಗ ಲೋಕಸಭಾ ಕ್ಷೇತ್ರ: ಗೋವಿಂದ ಕಾರಜೋಳರಿಗೆ ಬಿಜೆಪಿ ಹೈಕಮಾಂಡ್ ಮಣೆ

Date:

Advertisements

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಚಿತ್ರದುರ್ಗದ ಅಭ್ಯರ್ಥಿಯನ್ನು ಘೋಷಿಸದೇ ಕುತೂಹಲ ಮೂಡಿಸಿದ್ದ ಬಿಜೆಪಿ ಹೈಕಮಾಂಡ್, ಕೊನೆಗೂ ಬುಧವಾರ ಸಂಜೆ ಅಭ್ಯರ್ಥಿಯನ್ನು ಘೋಷಿಸಿದೆ.

ಚಿತ್ರದುರ್ಗ ಎಸ್‌ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಹೆಸರನ್ನು ಬುಧವಾರ ಸಂಜೆ ಅಧಿಕೃತವಾಗಿ ಘೋಷಿಸಿದೆ. ಹಾಲಿ ಸಂಸದ ಎ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ.

ಚಿತ್ರದುರ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾದಾರ ಚೆನ್ನಯ್ಯ ಶ್ರೀಗಳಿಗಾಗಿಯೇ ಟಿಕೆಟ್‌ ಘೋಷಣೆ ವಿಳಂಬ ಆಗುತ್ತಿದೆ ಎಂಬ ಚರ್ಚೆಗಳು ಶುರುವಾಗಿದ್ದವು. ಆದರೆ, ಅವರು ರಾಜಕೀಯ ಪ್ರವೇಶಕ್ಕೆ ಆಸಕ್ತಿ ತೋರಿಸದ ಹಿನ್ನೆಲೆ ಅವರನ್ನು ಮನವೊಲಿಸುವ ಕಾರ್ಯ ಬಿಜೆಪಿ ಹೈಕಮಾಂಡ್‌ನಿಂದ ನಡೆಸುತ್ತಿವೆ ಎಂದು ಸುದ್ದಿ ಹಬ್ಬಿತ್ತು. ಮಾದಾರ ಚೆನ್ನಯ್ಯ ಶ್ರೀಗಳನ್ನು ಕರ್ನಾಟಕದ ಯೋಗಿಯಾಗಿ ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂಬ ಮಾತುಗಳು ಕೂಡ ಕೇಳಿಬಂದಿದ್ದವು. ಈಗ ಎಲ್ಲದಕ್ಕೂ ತೆರೆ ಎಳೆದಿರುವ ಬಿಜೆಪಿ ಹೈಕಮಾಂಡ್, ಅಭ್ಯರ್ಥಿಯಾಗಿ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಿದೆ. 

Advertisements

ಚಿತ್ರದುರ್ಗ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರವಾಗಿದೆ. ಸೂಕ್ತ ಅಭ್ಯರ್ಥಿ ಸಿಗದ ಹಿನ್ನೆಲೆಯಲ್ಲಿ ವಿಜಯಪುರ ಮೂಲದವರಾದರೂ, ಹಿರಿಯ ಹಾಗೂ ಸಮುದಾಯದ ನಾಯಕ ಎಂಬ ವರ್ಚಸ್ಸಿನಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಹೆಸರು ಘೋಷಣೆಯ ಮೂಲಕ ಬಿಜೆಪಿ ತಾನು ಸ್ಪರ್ಧಿಸುತ್ತಿರುವ ಎಲ್ಲ 25 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿದ್ದು, ಬಿ ಎಲ್ ಚಂದ್ರಪ್ಪ ಅವರಿಗೆ ಟಿಕೆಟ್ ನೀಡಿತ್ತು.

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ.

ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಹೀಗಿದೆ:

(ಕೋಲಾರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಇನ್ನೂ ಅಂತಿಮಗೊಳಿಸಿಲ್ಲ)

BJP JDS LIST

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು: ಮೋದಿಗೆ ಶರದ್ ಪವಾರ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ...

ಮೋದಿ ಸಂಪುಟದಲ್ಲಿ ಶಿಂದೆ, ಅಜಿತ್ ಬಣಕ್ಕಿಲ್ಲ ಸ್ಥಾನ; ಶಿವಸೇನೆ ಸಂಸದ ಅಸಮಾಧಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ...

Download Eedina App Android / iOS

X